jayalalitaಚೆನೈ : ಅಪೊಲೋ ಆಸ್ಪತ್ರೆಯಲ್ಲಿ ಕಳೆದ ಕೆಲ ತಿಂಗಳುಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ತಮಿಳುನಾಡು ಮುಖ್ಯಂತ್ರಿ ಜೆ ಜಯಲಲಿತಾ ಬಹುತೇಕ ಗುಣಮುಖವಾಗಿದ್ದಾರೆ ಎಂದು ಆಸ್ಪತ್ರೆ ಘೋಷಿಸಿದ ಬೆನ್ನಲ್ಲೇ ಮತ್ತೆ ಅವರಿಗೆ ಹೃದಯಾಘಾತವಾಗಿದೆ. ಈ ಹಿನ್ನೆಲೆಯಲ್ಲಿ ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.
ಜಯಲಲಿತಾ ಅವರ ಆರೋಗ್ಯ ಪರಿಶೀಲನೆಗೆ ದೆಹಲಿಯಿಂದ ತಜ್ಙ ವೈದ್ಯರು ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಸಧ್ಯ ಸಿಎಂ ಜಯಲಲಿತಾ ಅವರಿಗೆ ಕೃತಕ ಉಸಿರಾಟ ವ್ಯವಸ್ಥೆ ಕಲ್ಪಿಸಲಾಗಿದ್ದು, ಸ್ಥಿತಿ ಗಂಭೀರವಾಗಿದೆ ಎಂದು ಅಪೋಲೋ ಆಸ್ಪತ್ರೆ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ತಮಿಳುನಾಡಿನಾದ್ಯಂತ ಬಿಗಿ ಭದ್ರತೆ ಹೆಚ್ಚಿಲಾಗಿದ್ದು, ಯಾವುದೇ ಅಹಿತಕರ ಘಟನೆ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಈಗಾಗಲೇ ಅರೆ ಸೇನಾ ತುಕಡಿ ಸೇರಿದಂತೆ ಪೊಲೀಸ್‌ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಸಿ ಎಂ ಜಯಲಲಿತಾ ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಪೋಲೊ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಣೆ ನಡೆಸಿದರು. ಎಐಐಡಿಎಂಕೆ ಪಕ್ಷದ ಸಾವಿರಾರು ಜನ ಕಾರ್ಯಕರ್ತರು ಅಪೊಲೋ ಆಸ್ಪತ್ರೆಯ ಹೊರಗೆ ಜಮಾಯಿಸಿದ್ದು, ಜಯಲಲಿತಾ ಆರೋಗ್ಯ ಸುಧಾರಣೆಗಾಗಿ ಪ್ರಾರ್ಥನೆ ನಡೆಸಿದ್ದಾರೆ.