whatsapp-imageಶಿರಸಿ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಶಿರಸಿ ರಾಜ್ಯಹೆದ್ದಾರಿಯಲ್ಲಿ ಸಾರಿಗೆಸಂಸ್ಥೆಯ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಸಾವನ್ನಪ್ಪಿದ್ದು, 7 ಜನರನ್ನು ಶಿರಸಿ ಸರರ್ಕಾರಿ ಆಸ್ಪತ್ರೆಗೆ ದಾಖಲಿಸಿದ ಘಟನೆ ನಡೆದಿದೆ.
ಸಿದ್ದಾಪುರ ಶಿರಸಿ ರಾಜ್ಯ ಹೆದ್ದಾರಿಯಲ್ಲಿರುವ ನಾಣಿಕಟ್ಟಾ ಗೋರ್ನಮನೆ ಕ್ರಾಸ್ ಬಳಿ ಇಂದು ಬೆಳಿಗ್ಗೆ ಈ ದುರ್ಘಟನೆ ನಡೆದಿದೆ. ಬೆಂಗಳೂರಿನಿಂದ ಶಿರಸಿಗೆ ಹಾಗೂ ಶಿರಸಿಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸುಗಳ ನಡುವೆ ಅಪಘಾತವಾಗಿದ್ದು, 7 ಜನರಿಗೆ ಗಂಭೀರ ಗಾಯವಾಗಿದೆ.