Interview13ಕಾರವಾರ: ಸೂರ್ಯ ಯೋಜನೆಯ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾದ ಉತ್ತರ ಕನ್ನಡ ಜಿಲ್ಲೆಯ ಅಭ್ಯರ್ಥಿಗಳಿಗೆ ಈ ಕೆಳಕಂಡ ದಿನಾಂಕದಂದು ಸಂದರ್ಶನ ಏರ್ಪಡಿಸಲಾಗಿದೆ.
ಕಾರವಾರ ಹಾಗೂ ಅಂಕೋಲಾ ತಾಲ್ಲೂಕಿನ ಅಭ್ಯರ್ಥಿಗಳಿಗೆ ಡಿಸೆಂಬರ್ 1 ರಂದು ಕಾರವಾರದಲ್ಲಿ , ಕುಮಟಾ, ಹೊನ್ನಾವರ ಮತ್ತು ಭಟ್ಕಳ ತಾಲ್ಲೂಕಿನ ಅಭ್ಯರ್ಥಿಗಳಿಗೆ ಡಿಸೆಂಬರ್ 2 ರಂದು ಕುಮಟಾದಲ್ಲಿ, ಶಿರಸಿ, ಸಿದ್ದಾಪುರ, ಮುಂಡಗೋಡ ,ಯಲ್ಲಾಪುರ ತಾಲ್ಲೂಕಿನ ಅಭ್ಯರ್ಥಿಗಳಿಗೆ ಡಿಸೆಂಬರ್ 3 ರಂದು ಶಿರಸಿಯಲ್ಲಿ ಹಾಗೂ ದಾಂಡೇಲಿ, ಹಳಿಯಾಳ ಮತ್ತು ಜೋಯಡಾ ತಾಲ್ಲೂಕಿನ ಅಭ್ಯರ್ಥಿಗಳಿಗೆ ಡಿಸೆಂಬರ್ 4 ರಂದು ದಾಂಡೇಲಿಯಲ್ಲಿ ಸಂದರ್ಶನ ನಡೆಸಲಾಗುವುದು. ಸಂದರ್ಶನದ ಸ್ಥಳ, ಹಾಗೂ ಸಮಯದ ವಿವರಗಳನ್ನು ಆಯ್ಕೆಯಾದ ಅಭ್ಯರ್ಥಿಗಳಿಗೆ ಎಸ್.ಎಂ.ಎಸ್ ಮೂಲಕ ತಿಳಿಸಲಾಗುವುದು. ಹಾಗೂ ಜಿಲ್ಲಾ ಪಂಚಾಯತ ವೆಬ್‍ಸೈಟ್ www.zpkarwar.kar.nic.in ನಲ್ಲಿ ಪ್ರಕಟಿಸಲಾಗುವುದೆಂದು ಉತ್ತರ ಕನ್ನಡ ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ವಿ.ರಾಮಪ್ರಸಾತ್ ಮನೋಹರ ತಿಳಿಸಿದ್ದಾರೆ.