pagade150ಕಾರವಾರ: ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯು ಪ್ರಸಕ್ತ ಸಾಲಿನಲ್ಲಿ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಸಂಶೋಧನಾ ಅಧ್ಯಯನಕ್ಕಾಗಿ (ಫೆಲೋಶಿಪ್)ಅರ್ಜಿ ಆಹ್ವಾನಿಸಲಾಗಿದೆ.
ಬಯಲಾಟ, ಸಣ್ಣಾಟ, ಸೂತ್ರದ ಗೊಂಬೆ,ತೊಗಲು ಗೊಂಬೆಯಾಟ, ಯಕ್ಷಗಾನ, ಶ್ರೀ ಕೃಷ್ಣಪಾರಿಜಾತ ಕಲಾಪ್ರಕಾರಗಳ ವಿಷದ ಬಗ್ಗೆ ಆಸಕ್ತಿಯಿರುವ ಕನ್ನಡ ಎಂಎ, (ಜಾನಪದ, ಮಹಿಳಾ ಅಧ್ಯಯನ, ಸಾಹಿತ್ಯ, ಚರಿತ್ರೆ, ಮಾನವಶಾಸ್ತ್ರ ಇತ್ಯಾದಿ) ವ್ಯಾಸಂಗ ಮಾಡಿರುವವರು ಅರ್ಜಿ ಸಲ್ಲಿಸಬಹುದು. ಆಸಕ್ತರಿರುವವರು ಆಯ್ಕೆ ಮಾಡಿಕೊಳ್ಳುವ ಅಧ್ಯಯನದ ವಿಷಯದ ಬಗ್ಗೆ ನಾಲ್ಕು ಪುಟಗಳ ಸಾರಲೇಖ(ಸಾರಾಂಶ) ಹಾಗೂ ತಮ್ಮ ಸಾಧನೆಯ ಕಿರುಪರಿಚಯ ಹಾಗೂ ಜಾತಿ ಪ್ರಮಾಣಪತ್ರದೊಂದಿಗೆ ಅರ್ಜಿಯನ್ನು ಫೆಬ್ರವರಿ 25 ರೊಳಗೆ ಸಲ್ಲಿಸಲು ಕೋರಿದೆ. ಅರ್ಜಿ ಸಲ್ಲಿಸುವವರು ಪರಿಶಿಷ್ಟ ವರ್ಗ ಅಥವಾ ಪರಿಶಿಷ್ಟ ಪಂಗಡಕ್ಕೆ ಮಾತ್ರ ಸೇರಿದವರಾಗಿರಬೇಕು. ಅರ್ಜಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ, 2ನೇ ಮಹಡಿ, ಚಾಲುಕ್ಯ ವಿಭಾಗ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-2 ಅಥವಾ ಇಮೇಲ್ ವಿಳಾಸ : [email protected] ಗೆ ಅರ್ಜಿಯನ್ನು ಕಳುಹಿಸಿಕೊಡಲು ಕೋರಿದೆ. ಹೆಚ್ಚಿನ ವಿವರಗಳಿಗೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯನ್ನು ಸಂಪರ್ಕಿಸುವಂತೆ ಕೋರಿದೆ.