*ಕಾಶ್ಮೀರ ಅನಂತ್’ನಾಗ್ ಜಿಲ್ಲೆಯಲ್ಲಿ ಎನ್ಕೌಂಟರ್, 3 ಉಗ್ರರನ್ನು ಮಟಾಷ್ ಗೈದ ಭಾರತೀಯ ಸೇನೆ* ಅನಂತ್’ನಾಗ್; ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಸೋಮವಾರ ತಿಳಿದುಬಂದಿದೆ. ಅನಂತ್ ನಾಗ್ ಜಿಲ್ಲೆಯ ಹಕುರಾ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿರುವುದಾಗಿ ಖಚಿತ ಮಾಹಿತಿಗಳು ಲಭ್ಯವಾದ ಹಿನ್ನಲೆಯಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆಗಿಳಿದಿದ್ದವು. ಸೇನೆ ಕಾರ್ಯಾಚರಣೆ ಆರಂಭಿಸುತ್ತಿದ್ದಂತೆಯೇ ಉಗ್ರರು ಸೇನಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಕಾರ್ಯಾಚರಣೆಯನ್ನು ಚುರುಕುಗೊಳಿಸಿದ ಸೇನಾ ಪಡೆ ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ವರದಿಗಳು ತಿಳಿಸಿವೆ.