ಚಂಡೀಗಢ,-ತರಗತಿಯಲ್ಲಿ ಟಾಪರ್(ಅಗ್ರಶ್ರೇಣಿ) ಆಗಲು ಸಾಧ್ಯವಾಗಲಿಲ್ಲ ಎಂಬ ಹತಾಶೆಯಿಂದ 11ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ತಂದೆಯ ರಿವಾಲ್ವಾರ್‍ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಂಜಾಬ್‍ನ ಜಿಂದ್ ಜಿಲ್ಲೆಯಲ್ಲಿ ನಡೆದಿದೆ. ಸಿವಾಹ ಗ್ರಾಮದ ಅಂಜಲಿ ಕುಮಾರಿ ಪಿಲ್ಲೂ ಸಾವಿಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ. ಪಂಜಾಬ್ ಹಣಕಾಸು ಸಚಿವ ಕ್ಯಾಪ್ಟನ್ ಅಭಿಮನ್ಯು ಅವರ ಒಡೆತನದ ಇಂಡೂಸ್ ಪಬ್ಲಿಕ್ ಶಾಲೆಯಲ್ಲಿ ಅಂಜಲಿ ವ್ಯಾಸಂಗ ಮಾಡುತ್ತಿದ್ದರು. ಈಕೆ ತಂದೆ ಗ್ರಾಮದ ಸರಪಂಚ್ ವೇದಪಾಲ್ ಸಿಂಗ್.

ಬಾಲ್ಯದಿಂದಲೂ ಪ್ರತಿಭಾನ್ವಿತೆಯಾಗಿದ್ದ ಈಕೆ ತರಗತಿಯಲ್ಲಿ ಉತ್ತಮ ಅಂಕಗಳನ್ನು ಗಳಿಸಿದ್ದರೂ ಟಾಪರ್ ಆಗಲಿಲ್ಲ ಎಂಬ ಕಾರಣಕ್ಕಾಗಿ ಮನೆಯ ಸ್ನಾನದ ಕೊಠಡಿಯಲ್ಲಿ ರಿವಾಲ್ವಾರ್‍ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವಿಚಾರಣೆಯಿಂದ ತಿಳಿದುಬಂದಿದೆ. ಪರೀಕ್ಷೆ ಫಲಿತಾಂಶದಲ್ಲಿ ಎಲ್ಲರಿಗಿಂತ ಅಗ್ರಸ್ಥಾನ ಗಳಿಸುವ ನಿರೀಕ್ಷೆ ಹೊಂದಿದ್ದಳು. ಅದು ಸಾಧ್ಯವಾಗಲಿಲ್ಲ ಎಂಬ ಹತಾಶೆಯಿಂದ ಸಾವಿಗೆ ಶರಣಾಗಿದ್ದಾಳೆ ಎಂದು ತಂದೆ ಸಿಂಗ್ ದು:ಖದಿಂದ ನುಡಿದಿದ್ದಾರೆ.