ಬಿಗ್ ಬ್ರೇಕಿಂಗ್: ಗೌರಿ ಲಂಕೇಶ್ ಗೆ ಗುಂಡಿಟ್ಟು ಹತ್ಯೆ ಮಾಡಿದ್ದ ಆರೋಪಿ ಅರೆಸ್ಟ್

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ನಡೆದಿದ್ದ ಖ್ಯಾತ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾದಳ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದು, ಈತನೇ ಗೌರಿ ಲಂಕೇಶ್ ರನ್ನು ಅವರ ನಿವಾಸದ ಮುಂದೆ ಹತ್ಯೆ ಮಾಡಿರುವ ಆರೋಪಿಯೆಂದು ಹೇಳಲಾಗುತ್ತಿದೆ.
ವಿಜಯಪುರ ಜಿಲ್ಲೆ ಸಿಂದಗಿ ಮೂಲದ 26 ವರ್ಷದ ಪರಶುರಾಮ್ ವಾಗ್ಮೋರೆಯನ್ನು ವಿಶೇಷ ತನಿಖಾ ತಂಡದ ಅಧಿಕಾರಿಗಳು ಬಂಧಿಸಿದ್ದು, 3 ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ಪಡೆದಿದ್ದಾರೆ.
ಗೌರಿ ಲಂಕೇಶ್ ಅವರಿಗೆ ಪರಶುರಾಮ್ ವಾಗ್ಮೋರೆಯೇ ಗುಂಡಿಕ್ಕಿ ಹತ್ಯೆ ಮಾಡಿರುವ ಶಂಕೆ ಹೊಂದಿರುವ ವಿಶೇಷ ತನಿಖಾ ತಂಡದ ಅಧಿಕಾರಿಗಳು, ಹೆಚ್ಚಿನ ವಿಚಾರಣೆ ಬಳಿಕ ಈ ಕುರಿತು ಮಾಹಿತಿ ಪಡೆಯುವ ನಿರೀಕ್ಷೆ ಹೊಂದಿದ್ದಾರೆ.