ಉತ್ತರಕನ್ನಡ: ಶಿರಸಿ -ಸಿದ್ದಾಪುರ ಕ್ಷೇತ್ರದ ಶಾಸಕ, ಬಿಜೆಪಿ ನಾಯಕ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಪಿತೃ ವಿಯೋಗ. 83 ವರ್ಷದ ಅನಂತ ಶಿವರಾಮ ಹೆಗಡೆ ಕಾಗೇರಿ ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ನಿನ್ನೆ ಶಿರಸಿಯ ರೋಟರಿ ಆಸ್ಪತ್ರೆಗೆ ದಾಖಲಾಗಿದ್ದರು. ಮೃತರು ಪತ್ನಿ ಹಾಗೂ ವಿಶ್ವೇಶ್ವರ ಹೆಗಡೆ ಸೇರಿದಂತೆ 7 ಜನ ಮಕ್ಕಳನ್ನು ಅಗಲಿದ್ದಾರೆ.
ಕುಳವೆ ಸಹಕಾರಿ ಸಂಘದಲ್ಲಿ 10 ವರ್ಷಗಳ ಕಾಲ ಅಧ್ಯಕ್ಷರಾಗಿ, ಆರ್ಎಸ್ಎಸ್ನ ಸ್ವಯಂ ಸೇವಕರಾಗಿ ಅನೇಕ ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಅಲ್ಲದೆ ಜನತಾ ವಿದ್ಯಾಲಯದ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.