ಬೆಂಗಳೂರು, ಜು.12-ರಾಜ್ಯದಲ್ಲಿ ಪ್ಲಾಸ್ಟಿಕ್ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಮುಂದಾಗಿರುವ ರಾಜ್ಯ ಸರ್ಕಾರ ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲ್‍ಗಳಿಗೂ ನಿಷೇಧ ಹೇರಲಿದೆ. ಪ್ಲಾಸ್ಟಿಕ್ ಬಾಟಲ್ ಬದಲಾಗಿ ಸ್ಟೀಲ್ ಲೋಟಗಳನ್ನು ಬಳಸುವಂತೆ ಸೂಚಿಸಲಾಗುತ್ತದೆ. ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ನಿಷೇಧ ಮಾಡುವ ಮೂಲಕ ಜಾಗೃತಿ ಮೂಡಿಸಲು ಸರ್ಕಾರ ಮುಂದಾಗಿದೆ.
ಅದೇ ರೀತಿ ಸಚಿವಾಲಯದ ಎಲ್ಲಾ ಸಭೆ, ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲ್ ಬದಲು ಸ್ಟೀಲ್ ಲೊಟಗಳಲ್ಲಿ ನೀರು ನೀಡುವಂತೆ ಆದೇಶ ಹೊರಡಿಸಲು ಸಿದ್ದತೆ ನಡೆದಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಶೀಘ್ರದಲ್ಲೇ ಆದೇಶ ಹೊರಡಿಸಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.