self help groupಕಾರವಾರ : ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು 2015-16 ನೇ ಸಾಲಿನ ಕಿರುಸಾಲ ಯೋಜನೆಯಡಿಯಲ್ಲಿ ಸ್ತ್ರೀ ಶಕ್ತಿ ಸ್ವ ಸಹಾಯ ಗುಂಪುಗಳಿಗೆ ಸಣ್ಣ ಉದ್ದಿಮೆಗಳನ್ನು ನಡೆಸಲು ಬಡ್ಡಿ ರಹಿತ ಸಾಲ ನೀಡಲು ಅರ್ಜಿ ಆಹ್ವಾನಿಸಿದೆ.
ಆಸಕ್ತಿರುವ ಸ್ತ್ರೀ ಸಹಾಯ ಗುಂಪುಗಳು ಅರ್ಜಿಯನ್ನು ಸೂಕ್ತ ಅಡಕಗಳೊಂದಿಗೆ ಸೆಪ್ಟೆಂಬರ್ 20 ರೊಳಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರವಾರ ವಿಳಾಸಕ್ಕೆ ಸಲ್ಲಿಸಲು ಕೋರಿದೆ. ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಗಾಗಿ ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರವಾರ ಅಥವಾ ಜಿಲ್ಲೆಯ ಎಲ್ಲಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಿ ಪಡೆಯಬಹುದಾಗಿದೆ.